ಬೇಟೋಳಿಯಲ್ಲಿ ಸ್ಕೂಟರ್ ಮೇಲೆ ಮರ ಬಿದ್ದು ಮಹಿಳೆಗೆ ಗಾಯ
admincoorgdaily

ವಿರಾಜಪೇಟೆ: ವಿರಾಜಪೇಟೆ ಹೋಬಳಿ ಬೇಟೋಳಿ ಗ್ರಾಮದಲ್ಲಿ ನಡೆದ ಅವಘಡದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಯ ಮೇಲೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೇಟೋಳಿ ಗ್ರಾಮದ ನಿವಾಸಿ ಸಿಂಧು ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ, ಇದ್ದಕ್ಕಿದ್ದಂತೆ ಮರ ಅವರ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಸಿಂಧು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಿಸಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.