ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಾರ್ಚ್ 15ರಂದು ಮಹಿಳಾ ದಿನಾಚರಣೆ

Mar 12, 2026 - 00:36
Mar 12, 2026 - 00:36
 0  55
ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಾರ್ಚ್ 15ರಂದು ಮಹಿಳಾ ದಿನಾಚರಣೆ

ವಿರಾಜಪೇಟೆ: ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾರ್ಚ್ 15ರಂದು ಭಾನುವಾರ ಬೆಳಿಗ್ಗೆ 9.30 ಗಂಟೆಗೆ ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ನಲ್ಲಿ ಮಹಿಳಾ ದಿನಾಚರಣೆ ಹಾಗೂ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30 ಗಂಟೆಗೆ ಮನರಂಜನಾ ಆಟಗಳು ನಡೆಯಲಿದ್ದು, 10.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕರಾದ ತೆಕ್ಕಡೆ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂತು ವಹಿಸಲಿದ್ದಾರೆ. ಜಂಬರ ಉದ್ಘಾಟನೆಯನ್ನು ಕವಿ ಹಾಗೂ ಸಾಹಿತಿ ಪೂಜಾರೀರ ಕೃಪಾ ದೇವರಾಜ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ವಿಶೇಷ ಸೀರೆ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕöÈತ ಕಟ್ಟೆಮನೆ ಪ್ರೇಮ ಗಣೇಶ್ ಉದ್ಘಾಟಿಸಲಿದ್ದಾರೆ. ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗೌಡ ಮಹಿಳಾ ಒಕ್ಕೂಟದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0