Kodagu

ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶ: ಕಾರ್ಮಿಕ ಮೃತ್ಯು

admincoorgdaily

ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಸ್ಪರ್ಶ: ಕಾರ್ಮಿಕ ಮೃತ್ಯು

ಸಿದ್ದಾಪುರ, ಆ.23: ಕಾಫಿ ತೋಟದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಹಚ್ಚಿನಾಡು ಗ್ರಾಮದಲ್ಲಿ ನಡೆದಿದೆ. ಹಚ್ಚಿನಾಡು ಗ್ರಾಮದ ಎಂ. ಸುರೇಶ್ ನಾಣಯ್ಯ ಅವರ ತೋಟದ ಲೈನ್‌ಮನೆಯಲ್ಲಿ ವಾಸವಿದ್ದ ಮಣಿ (60) ಮೃತರು.

 ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಮಣಿ ಅವರು ಅಳಿಯನೊಂದಿಗೆ ಅಡಿಕೆಗೆ ಔಷಧಿ ಸಿಂಪಡಿಸುತ್ತಿದ್ದಾಗ ತೋಟದೊಳಗೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಪೈಪ್ ಮತ್ತು ಗನ್ ತಗುಲಿ ವಿದ್ಯುತ್ ಆಘಾತವಾಗಿದೆ. ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.