ಆ.12ರಂದು ವಿಶ್ವ ಆನೆ ದಿನಾಚರಣೆ
ಸಿದ್ದಾಪುರ:- ವಿಶ್ವ ಆನೆ ದಿನಾಚರಣೆ ಅಂಗವಾಗಿ ಆ.12ರಂದು ಬೆಳಿಗ್ಗೆ 10.30ಕ್ಕೆ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹುಣಸೂರು ವನ್ಯಜೀವಿ ವಿಭಾಗ (ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ) ಹಾಗೂ ವಿರಾಜಪೇಟೆ ಅರಣ್ಯ ವಿಭಾಗದ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಆನೆಗಳ ನಿಯಂತ್ರಣ ಹಾಗೂ ನಿರ್ವಹಣೆಗೆ ಬಳಸಲಾಗುತ್ತಿರುವ ವಿವಿಧ ಆಧುನಿಕ ತಂತ್ರಜ್ಞಾನವುಳ್ಳ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ. ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕೈಗೊಂಡಿರುವ ಆಧುನಿಕ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
