Kodagu

ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

admincoorgdaily

ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿರಾಜಪೇಟೆ, ಜೂನ್ 5: ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಹಸೈನಾರ್ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ಇಲ್ಯಾಸ್ ಅನ್ವಾರಿ ಉಪಸ್ಥಿತರಿದ್ದರು. ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರದ ಮಹತ್ವದ ಕುರಿತು ಅನ್ವಾರುಲ್ ಹುದಾ ಶಿಕ್ಷಣ ಸಂಸ್ಥೆಗಳ ಸದಸ್ಯ ಯಾಕೂಬ್ ರಿಜ್ವಿ ಮಾತನಾಡಿದರು.

 ವಿದ್ಯಾರ್ಥಿಗಳಿಗಾಗಿ ವಿವಿಧ ಪರಿಸರ ಸಂಬಂಧಿತ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.