ಕಲ್ಲುಬಾಣೆಯ ಬದ್ರಿಯಾ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 6, 2026 - 10:39
 0  228
ಕಲ್ಲುಬಾಣೆಯ ಬದ್ರಿಯಾ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿರಾಜಪೇಟೆ: ಆರ್ಜಿ ಗ್ರಾಮದ ಕಲ್ಲುಬಾಣೆಯ ಬದ್ರಿಯಾ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ವಿದ್ಯಾರ್ಥಿಗಳಿಂದ ಪರಿಸರ ದಿನದ ಅಂಗವಾಗಿ ಪೋಸ್ಟರ್ ತಯಾರಿಸಲಾಯಿತು ಹಾಗೂ ಭಾಷಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 9ನೇ ತರಗತಿಯ ರಿಝಾ ಫಾತಿಮಾ ಹಾಗೂ ಅಫ್ಲಾ ಫಾತಿಮಾ, 8ನೇ ತರಗತಿಯ ಫಾತಿಮತ್ ಸಿದಾ ಮತ್ತು 4ನೇ ತರಗತಿಯ ಫಾತಿಮತ್ ನೂರಾ ಅವರು ವಿಶ್ವ ಪರಿಸರ ದಿನದ ಮಹತ್ವ, ಪರಿಸರ ಸಂರಕ್ಷಣೆ ಹಾಗೂ ಮರಗಳ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಭಾಷಣಗಳನ್ನು ಮಾಡಿದರು.

 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ಲವೀನ್ ಲೋಫೇಸ್ ಅವರು ಪರಿಸರವನ್ನು ಕಾಪಾಡುವುದು ಕೇವಲ ಸರಕಾರದ ಅಥವಾ ಕೆಲವರ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರನ್ನು ಮಿತವಾಗಿ ಬಳಸುವುದು, ಮರಗಳನ್ನು ನೆಡುವುದು ಮತ್ತು ಅವುಗಳನ್ನು ಪೋಷಿಸುವಂತಹ ಸಣ್ಣ ಸಣ್ಣ ಕಾರ್ಯಗಳ ಮೂಲಕ ಪರಿಸರ ಸಂರಕ್ಷಣೆಗೆ ದೊಡ್ಡ ಕೊಡುಗೆ ನೀಡಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು ಬಳಿಕ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಅಧ್ಯಾಪಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು.

 ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಶೋಭನ, ಸ್ಮಿತಾ, ನಿರ್ಮಲ, ಆದಿರ, ಚಂದ್ರಶೇಖರ್, ಪುಷ್ಪ, ಶ್ವೇತಾ, ರಾಜೀಯಾ ಧನ್ಯ, ಕಛೇರಿ ಸಿಬ್ಬಂದಿ ತಾರ, ಹಾಜಿರಾ ಹಾಗೂ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಪ್ರಮುಖರು, ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0