Kodagu

ಕಲ್ಲುಬಾಣೆ ದಾರುಲ್ ಇಸ್ಲಾಂ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ

admincoorgdaily

ಕಲ್ಲುಬಾಣೆ ದಾರುಲ್ ಇಸ್ಲಾಂ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿರಾಜಪೇಟೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಾರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಕಲ್ಲುಬಾಣೆ ಎಸ್‌ಕೆಎಸ್‌ಬಿವಿ ವತಿಯಿಂದ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಶುಕ್ರವಾರ ಜುಮಾ ನಮಾಝಿನ ನಂತರ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖತೀಬರು ಹಾಗೂ ಎಸ್‌ಕೆಎಸ್‌ಬಿವಿ ವ್ಯವಸ್ಥಾಪಕರಾದ ಅಬ್ದುಲ್ ರಝಾಕ್ ಅಝಹರಿ ಉಸ್ತಾದರು ಪರಿಸರ ಸಂರಕ್ಷಣೆಯ ಮಹತ್ವ, ಸ್ವಚ್ಛತೆ ಮತ್ತು ಮರಗಳ ಸಂರಕ್ಷಣೆಯ ಕುರಿತು ಮಾತನಾಡಿದರು. ಬಳಿಕ ಮಹಲ್ ಅಧ್ಯಕ್ಷರಾದ ಪಿ. ಕೆ. ಅಫ್ಸಲ್ ಅವರ ನೇತೃತ್ವದಲ್ಲಿ ಮಸೀದಿ ಸಮೀಪ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

 ನಂತರ ಎಸ್‌ಕೆಎಸ್‌ಬಿವಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಮದರಸ ಅಧ್ಯಾಪಕರು ಸೇರಿ ಸಾರ್ವಜನಿಕ ರಸ್ತೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಸಮಾಜಕ್ಕೆ ಉತ್ತಮ ಸಂದೇಶವನ್ನು ರವಾನಿಸಿದರು.