ಜೂ.05 ರಂದು ವಿಶ್ವ ಪರಿಸರ ದಿನಾಚರಣೆ

Jun 4, 2026 - 17:31
 0  97
ಜೂ.05 ರಂದು ವಿಶ್ವ ಪರಿಸರ ದಿನಾಚರಣೆ

ಮಡಿಕೇರಿ ಜೂ.04,:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ವಕೀಲರ ಸಂಘ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್, 05 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ‘ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ-2026 ಕಾರ್ಯಕ್ರಮ ನಡೆಯಲಿದೆ. 

ಜೂನ್, 05 ರಂದು ಬೆಳಗ್ಗೆ 9.30 ಗಂಟೆಗೆ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತ(ಹಳೇ ಖಾಸಗಿ ಬಸ್ಸು ನಿಲ್ದಾಣ)ದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುವರೆಗೆ ಪರಿಸರ ಜಾಥಾ ನಡೆಯಲಿದೆ. ಮಡಿಕೇರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಧೀಶರಾದ ಸಿ.ಕೆ.ಬಸವರಾಜ್ ಅವರು ಜಾಥಾ ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಸಸಿ ನೆಡುವುದು ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. 

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೈಸೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಎಸ್.ಕೆ.ವಾಸುದೇವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಆರ್.ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ|| ಮಹೇಶ್ವರಿ ಕುಮಾರಿ ಸಿಂಗ್ ಇತರರು ಪಾಲ್ಗೊಳ್ಳಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0