State News

ಯದುವೀರ್ ನಿರಂತರ ಪ್ರಯತ್ನ: ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕ್ರಮ; ಸಂಸದರ ಸಮ್ಮುಖದಲ್ಲಿ ಮಾರ್ಚ್‌ 2ರಂದು ಸಭೆ ನಡೆಸಲು ನಿರ್ಧಾರ

admincoorgdaily

ಯದುವೀರ್ ನಿರಂತರ ಪ್ರಯತ್ನ: ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕ್ರಮ;  ಸಂಸದರ ಸಮ್ಮುಖದಲ್ಲಿ ಮಾರ್ಚ್‌ 2ರಂದು ಸಭೆ ನಡೆಸಲು ನಿರ್ಧಾರ

ಮೈಸೂರು, ಫೆ. 23: ಮೈಸೂರು-ಕೊಡಗು ಕ್ಷೇತ್ರದಲ್ಲಿರುವ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಡುತ್ತಿರುವ ಪ್ರಯತ್ನಕ್ಕೆ ಫಲ ದೊರೆತಿದೆ.

ಈ ನಿಟ್ಟಿನಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಮಾರ್ಚ್‌ 2ರಂದು ಸಭೆ ನಡೆಸಲು ತಂಬಾಕು ಮಂಡಳಿ ಆಯೋಜಿಸಿದೆ. ತಂಬಾಕು ಬೆಳೆಗಾರರು ಎದುರಿಸುತ್ತಿರುವ ಪ್ರಸ್ತುತ ಬೆಲೆ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ವಲಯದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ಭಾಗವಹಿಸುವವರಿವರು: ಸಂಸದ ಯದುವೀರ್‌ ಒತ್ತಾಯದ ಮೇರೆಗೆ ನಡೆಯಲಿರುವ ಸಭೆಯಲ್ಲಿ ತಂಬಾಕು ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು, ಐಟಿಸಿ ಮುಖ್ಯಸ್ಥರು ಮತ್ತು ಇತರ ಪ್ರಮುಖ ತಂಬಾಕು ಖರೀದಿ ಕಂಪನಿಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾರುಕಟ್ಟೆ ಪರಿಸ್ಥಿತಿ ಬಗ್ಗೆ ಚರ್ಚೆ; ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿ, ರೈತರ ಕಳವಳ ಮತ್ತು ತಂಬಾಕು ವ್ಯಾಪಾರದಲ್ಲಿ ನ್ಯಾಯಯುತ ಬೆಲೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಮಾಲೋಚನೆ ನಡೆಸುವ ನಿರೀಕ್ಷೆ ಇದೆ. ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಈಗಾಗಲೇ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಪರಿಹಾರಗಳನ್ನು ಒದಗಿಸಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದೇವೆ. ಸಭೆಯಲ್ಲಿ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು. ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು.