ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ವರ್ಷಗಳು ಕಳೆದರು, ಅಂದು ಕಾಮಗಾರಿ ನಡೆಸಿದ ಸ್ಥಳೀಯ ಗುತ್ತಿಗೆದಾರರಿಗೆ 180 ಕೋಟಿ ಹಣವನ್ನು ಉಳಿಸಿಕೊಂಡಿದೆ: ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಆಕ್ರೋಶ
ಮಡಿಕೇರಿ-ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ವರ್ಷಗಳು ಕಳೆದ್ರು ಅಂದು ಕಾಮಗಾರಿ ನಡೆಸಿದ ಸ್ಥಳೀಯ ಗುತ್ತಿಗೆದಾರರಿಗೆ 180 ಕೋಟಿ ಹಣವನ್ನು ಉಳಿಸಿಕೊಂಡಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಸರ್ಕಾರದ ನಡೆಯ ವಿರುದ್ಧ ಅಕ್ರೋಶ ಹೊರ ಹಾಕಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಕಳೆದ ಎರಡುವರೆ ವರ್ಷಗಳಿಂದ ಕೆಲಸವು ನೀಡುತ್ತಿಲ್ಲ ಹಾಗೂ ಈ ಹಿಂದಿನ ವರ್ಷಗಳಲ್ಲಿ ಕೆಲಸ ಮಾಡಿರುವ ಬಾಕಿ ಹಣ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಮಾ.5 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಮುಷ್ಕರ ನಡೆಸಲಿದೆಎಂದು ತಿಳಿಸಿದ್ರು.
ಕಾಮಗಾರಿ ನಿರ್ವಹಿಸಿದ್ದ ಬಾಕಿ ಬಿಲ್ ಬಿಡುಗಡೆ ಮಾಡಲು ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕ ಪರ್ಸೆಂಟೇಜ್ ನೀಡಬೇಕಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ವರ್ಷಗಳಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 37 ಸಾವಿರ ಕೋಟಿ ರೂ.ಬಾಕಿ ಉಳಿಸಿಕೊಂಡಿದೆ. ಬಾಕಿ ಬಿಡುಗಡೆಗೆ ಎಷ್ಟು ಪರ್ಸೆಂಟೇಜ್ ಹಣ ನೀಡಬೇಕಾಗಿದೆ ಎಂಬುದನ್ನು ಈಗ ಹೇಳುವುದಿಲ್ಲ.
ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಗುತ್ತಿಗೆದಾರರ ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆಯಲಿ, ಆ ಸಭೆಯಲ್ಲಿ ಯಾವುದೇ ಮುಚ್ಚು ಮರೆಯಿಲ್ಲದೆ ಎಲ್ಲ ಮಾಹಿತಿ ನೀಡಲಾಗುವುದು ಎಂದರು. ಗುತ್ತಿಗೆದಾರರ ಕಷ್ಟಗಳನ್ನು ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ. ಮೂರು ವರ್ಷಗಳಿಂದ ಸರ್ಕಾರ ಬಾಕಿ ಬಿಲ್ ಬಿಡುಗಡೆ ಮಾಡದ ಕಾರಣ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಲ, ಬಡ್ಡಿ ಪಾವತಿಸಲಾಗದೇ ವಿಷ ಕುಡಿಯುವ ಸ್ಥಿತಿಗೆ ತಲುಪಿದ್ದಾರೆ. ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಗುತ್ತಿಗೆದಾರರಿಗೆ 37 ಸಾವಿರ ಕೋಟಿ ರೂಪಾಯಿ ಬಾಕಿ ಬಿಲ್ ಬಿಡುಗಡೆ ಮಾಡಬೇಕಿದೆ.ಕೊಡಗು ಜಿಲ್ಲೆಯಲ್ಲೂ 2018 ರಲ್ಲಿ ನಡೆದ ಪ್ರಕೃತಿ ವಿಕೋಪ ದಡಿಯಲ್ಲಿ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಸುಮಾರು 180 ಕೋಟಿ ರೂಪಾಯಿ ಬಾಕಿ ಬಿಲ್ ಬಿಡುಗಡೆಯಾಗಬೇಕಿದೆ ಎಂದು ಆಗ್ರಹಿಸಿದರು.