ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ವತಿಯಿಂದ ಆ.28ರಂದು ಗದ್ದೆನಾಟಿ ಹಾಗೂ ಕೆಸರು ಗದ್ದೆ ಕ್ರೀಡಾಕೂಟ
ಸೋಮವಾರಪೇಟೆ: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ವತಿಯಿಂದ ಆ.28ರಂದು ಗದ್ದೆನಾಟಿ ಹಾಗು ಕೆಸರು ಗದ್ದೆ ಕ್ರೀಡಾಕೂಟವನ್ನು ಹೆಬ್ಬಾಲೆ ಗ್ರಾಮದಲ್ಲಿ ಅಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ತಿಳಿಸಿದ್ದಾರೆ.
ಹೆಬ್ಬಾಲೆ ಗ್ರಾಮದ ಕೃಷಿಕ ಸಂದೇಶ್ ಅವರ ಭತ್ತದ ಗದ್ದೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಾಗುತ್ತದೆ. ಪುರುಷರಿಗೆ ವಾಲಿಬಾಲ್ ಮತ್ತು ಮಹಿಳೆ ಮತ್ತು ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಸ್ಥಳೀಯರಿಗೂ ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಿಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೃಷಿ ಸಂಸೃತಿಯ ಸಂರಕ್ಷಣೆ, ಸಾಂಪ್ರದಾಯಿಕ ಕೃಷಿ ಪದ್ದತಿಗಳ ಪ್ರೋತ್ಸಾಹ ಹಾಗು ಯುವಜನರಲ್ಲಿ ಕೃಷಿ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ 2018ರಿಂದಲೇ ಭತ್ತ ನಾಟಿ, ಕೆಸರು ಗದ್ದೆಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಭಾಗದಲ್ಲಿರುವ ಕೃಷಿ ಭೂಮಿಯನ್ನು ತೊರೆದು ಯುವಕರು ನಗರ ಪ್ರದೇಶದಲ್ಲಿ ಜೀವನವನ್ನು ರೂಪಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಕೃಷಿಯಲ್ಲೂ ಉತ್ತಮ ಜೀವನ ಸಾಗಿಸಬಹುದು ಎಂಬುದನ್ನು ನಮ್ಮ ಹಿರಿಯರ ಉದಾಹರಣೆಗಳಿವೆ. ಈ ಬಗ್ಗೆ ಯುವಕರಲ್ಲಿ ಕೃಷಿ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶವೂ ಇದೆ. 2018ರಲ್ಲಿ ಐಟಿ,ಬಿಟಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಗದ್ದೆ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಹಿಸಿದ್ದರು ಎಂದು ಹೇಳಿದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಡಾ.ಮಂತರ್‌ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಉದ್ಯಮಿಗಳಾದ ಎಡಿಕೇರಿ ಪ್ರಸನ್ನ, ಹರಪಳ್ಳಿ ರವೀಂದ್ರ, ಕೊತ್ನಳ್ಳಿ ಅರುಣ್, ನಾಪಂಡ ಮುತ್ತಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಸಜನ್ ಮಂದಣ್ಣ, ಜಗದೀಶ್ ಬೋಪಣ್ಣ, ಖಜಾಂಚಿ ಮೊಹೀತ್ ತಿಮ್ಮಯ್ಯ, ಸಂಚಾಲಕ ಆದರ್ಶ್ ತಮ್ಮಯ್ಯ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
