ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಡಿಕೇರಿ: ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಸಂಜನಾ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ.ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿ ದಿನೇಶ್ ಅವರು ಭೇಟಿ ಪರಿಶೀಲನೆ ನಡೆಸಿ,ಮೃತಳ ತಂದೆ ಅಪ್ಪು ಅವರು ನೀಡಿರುವ ದೂರು ಸ್ವೀಕರಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.