ವಿದ್ಯುತ್ ಅವಘಡದಿಂದ ಯುವಕನ ಮೃತ್ಯು:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಎ‌ಎಸ್ ಪೊನ್ನಣ್ಣ

Jul 8, 2025 - 20:25
 0  89
ವಿದ್ಯುತ್ ಅವಘಡದಿಂದ ಯುವಕನ ಮೃತ್ಯು:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಎ‌ಎಸ್ ಪೊನ್ನಣ್ಣ

ಮಡಿಕೇರಿ:ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಎರಡು‌ ದಿನಗಳ ‌ಹಿಂದೆ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕ ಪ್ರದೀಪ್ ಹೆಚ್.ಪಿ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣಮವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.ಶಾಸಕರು, ವೈಯಕ್ತಿಕ ಧನ ಸಹಾಯ ಮಾಡಿದರಲ್ಲದೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್,ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0