Kodagu

ರಸ್ತೆ ಮಧ್ಯೆ ಒಂಟಿ ಸಲಗ ಪ್ರತ್ಯಕ್ಷ

admincoorgdaily

ರಸ್ತೆ ಮಧ್ಯೆ ಒಂಟಿ ಸಲಗ ಪ್ರತ್ಯಕ್ಷ
ಸಿದ್ದಾಪುರ:ತೂಬನಕೊಲ್ಲಿ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ಹಾವಳಿ ಕಾಣಿಸಿಕೊಂಡಿದ್ದು, ಬೆಳ್ಳಂಬೆಳಗ್ಗೆ ರಸ್ತೆ ಮಧ್ಯೆ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ರಸ್ತೆ ಬದಿ ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿ ಎದುರೇ ಆನೆ ಬಂದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂಟಿ ಸಲಗವನ್ನು ಕಂಡು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಆನೆಗಳ ಓಡಾಟ ಹೆಚ್ಚಾಗಿದ್ದು, ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.