ಎ.ಎಸ್. ಪೊನ್ನಣ್ಣ ಭೇಟಿಯಾದ ರಾಜ್ಯ ಚುನಾವಣಾ ಆಯುಕ್ತ ಡಾ. ಸಂಗ್ರೇಶಿ, ಮಾನವ ಹಕ್ಕು ಆಯೋಗದ ಅಧ್ಯಕ್ಷ ದೇಸಾಯಿ
admincoorgdaily

ಬೆಂಗಳೂರು:ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ. ಜಿ.ಎಸ್ ಸಂಗ್ರೇಶಿ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಪದ್ಮರಾಜ್ ನೇಮಚಂದ್ರ ದೇಸಾಯಿ ರವರು ಇಂದು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು ಭೇಟಿಯಾಗಿ ಅಭಿನಂದಿಸಿದರು.
ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಶ್ರೀ ಪೊನ್ನಣ್ಣ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿ ಶುಭ ಕೋರಿದರು.