ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು
admincoorgdaily

ಕುಶಾಲನಗರ: ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಹೇರೂರು ಹಾಡಿ ನಿವಾಸಿ ವಿನೋದ್ (27) ಎಂದು ಗುರುತಿಸಲಾಗಿದೆ.
ಸಂಜೆ ವೇಳೆ ನದಿಗೆ ಈಜಲು ತೆರಳಿದ್ದ ವಿನೋದ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸರು, ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರಿಂದ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ಕತ್ತಲಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.