Kodagu

ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ

admincoorgdaily

ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ
ಮಡಿಕೇರಿ ಸೆ.10 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರು ನೇಮಕಾತಿ ಆದೇಶ ಹೊರಡಿಸಿದ್ದು, ಪದವೀಧರ ವಿಭಾಗದ ಸಂಘಟನೆಯನ್ನು ಕೊಡಗು ಜಿಲ್ಲೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯ ಸಮಿತಿಯ ಮಾರ್ಗದರ್ಶನದಲ್ಲಿ ಪದವೀಧರ ವಿಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಕಾಂಗ್ರೆಸ್ ಬಲವರ್ಧನೆಗೆ ಕಾರ್ಯೋನ್ಮುಖರಾಗುವುದಾಗಿ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.