Kodagu

ಕುಶಾಲನಗರ ಸರ್ಕಾರಿ ಬಸ್ ನಿಲ್ದಾಣದ ಬಳಿ KSRTC ಬಸ್-ಪಿಕಪ್ ನಡುವೆ ಅಪಘಾತ

admincoorgdaily

ಕುಶಾಲನಗರ ಸರ್ಕಾರಿ ಬಸ್ ನಿಲ್ದಾಣದ ಬಳಿ KSRTC ಬಸ್-ಪಿಕಪ್ ನಡುವೆ ಅಪಘಾತ
ಕುಶಾಲನಗರ; ನಗರದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ಇಂದು KSRTC ಬಸ್ ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಯಾವುದೇ ಗಾಯಗಳು ವರದಿಯಾಗಿಲ್ಲ. ಆದರೆ ಅಪಘಾತದಿಂದಾಗಿ ಬಸ್ ನಿಲ್ದಾಣದ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.