ಸೃಜನಾತ್ಮಕ ಸ್ಪರ್ಧೆಯಲ್ಲಿ ಕೆಪಿಎಸ್ ಪೊನ್ನಂಪೇಟೆ ಶಾಲೆಯ ವಿದ್ಯಾರ್ಥಿಗಳ ಸಾಧನೆ
admincoorgdaily

ಪೊನ್ನಂಪೇಟೆ: ತಾಲೂಕು ಮಟ್ಟದ ಸೃಜನಾತ್ಮಕ ಸ್ಪರ್ಧೆಗಳಲ್ಲಿ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ನ. 16ರಂದು ವಿರಾಜಪೇಟೆಯ ಜಿ.ಎಂ.ಪಿ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಹೆಚ್.ಜಿ. ಸಾನೀಯ ಪ್ರಥಮ ಸ್ಥಾನ ಗಳಿಸಿದ್ದಾರೆ. ಕವನ ಸ್ಪರ್ಧೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಹೆಚ್.ಎಂ. ಉತ್ತಮ ಸಾಧನೆ ತೋರಿದ್ದಾರೆ. ಕಥೆ ಹೇಳುವ ಸ್ಪರ್ಧೆಯಲ್ಲಿ ಕೃತಿಕಾ ನಾಯಕ್ ಎಸ್. ಭಾಗವಹಿಸಿ ಶಾಲೆಯನ್ನು ಪ್ರತಿನಿಧಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದ್ದಾರೆ.