Kodagu

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆ ವಿದ್ಯಾರ್ಥಿಗಳ ಸಾಧನೆ

admincoorgdaily

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆ ವಿದ್ಯಾರ್ಥಿಗಳ ಸಾಧನೆ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು :ಇತ್ತೀಚೆಗೆ ನಡೆದ ತಾಲೂಕು ಮಟ್ಟದ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಪೊಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದ ಬಾಲಕರ ಫುಟ್ಬಾಲ್  ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಬಾಲಕಿಯರ ವಿಭಾಗದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ, ಅಥ್ಲೆಟಿಕ್ಸ್ ನಲ್ಲಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ಸಹದ್ ಟಿ. ಹೆಚ್. ದ್ವಿತೀಯ ಸ್ಥಾನ, ಮೊಹಮ್ಮದ್ ಅಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಡಿಸ್ಕಸ್ ತ್ರೋ ವಿಭಾಗದಲ್ಲಿ ಆಶೀರ್ ದ್ವಿತೀಯ ಸ್ಥಾನ, ಭಾರದ ಗುಂಡು ಎಸೆತ ವಿಭಾಗದಲ್ಲಿ ನಾಸಿಲಾ ಎಂ. ಎಚ್.ದ್ವಿತೀಯ ಸ್ಥಾನ,ಉದ್ದ ಜಿಗಿತದಲ್ಲಿ ಅಜ್ಮಲ್ ಸಿ.ಜೆ. ದ್ವಿತೀಯ ಸ್ಥಾನ,ಎತ್ತರ ಜಿಗಿತ ಸ್ಪರ್ಧೆಯಲ್ಲಿ ಚೇತನ್ ಎಂ.ಸಿ. ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ,ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ . ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅಥ್ಲೆಟಿಕ್ಸ್ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ  ಕೆ.ಎಚ್. ನಸ್ರೀನಾ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಡಿಸ್ಕಸ್ ತ್ರೋ ವಿಭಾಗದಲ್ಲಿ ವಿಧಾ ದ್ವಿತೀಯ ಸ್ಥಾನ, ನಜಾನ್ ಕೆ.ಕೆ. ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ.
 ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಾಗಿ ಶಾಲೆಯ ಶಿಕ್ಷಕರಾದ ಸುನಿಲ್ ಹಾಗೂ ಪಾಲಿಕಾ ಅವರು ಕಾರ್ಯನಿರ್ವಹಿಸಿದರು.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.