ನಾಟ್ಯಸಂಕಲ್ಪ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ
admincoorgdaily

ಪೊನ್ನಂಪೇಟೆ, ಅ. 29: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ಜೂನಿಯರ್ ನೃತ್ಯ ಪರೀಕ್ಷೆಯಲ್ಲಿ ಪೊನ್ನಂಪೇಟೆಯ ನಾಟ್ಯಸಂಕಲ್ಪ ನೃತ್ಯ ಕಲಾಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಒಬ್ಬ ವಿದ್ಯಾರ್ಥಿನಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಾದ ತನ್ವಿ, ಕಾವೇರಮ್ಮ, ಲೇಖನಾ, ನಿರೀಕ್ಷಿತಾ, ದಿಶಿಕಾ, ನಿರೀಕ್ಷಾ, ಸಾನ್ವಿ, ಸಮೀಕ್ಷಾ ಹಾಗೂ ಲಹರಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ್ದಾರೆ.
ನೃತ್ಯಗುರು ಕು. ಪ್ರೇಕ್ಷಾ ಭಟ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಹಾಗೂ ನೃತ್ಯಕಲೆಯ ಮೇಲಿನ ಆಸಕ್ತಿ ಈ ಯಶಸ್ಸಿಗೆ ಕಾರಣವಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ನೃತ್ಯಗುರು ಪ್ರೇಕ್ಷಾ ಭಟ್, ಪೋಷಕರು ಹಾಗೂ ಕಲಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿಯೂ ನೃತ್ಯ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.