ಟಿ.ಶೆಟ್ಟಿಗೇರಿಯಲ್ಲಿ ಐನ್ ಮನೆ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ
admincoorgdaily

ಪೊನ್ನಂಪೇಟೆ:ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮದ ವಿವಿಧ ಭಾಗಗಳ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಟಿ.ಶೆಟ್ಟಿಗೇರಿ ಗ್ರಾಮದ ಕೈಬುಲೀರ ಐನ್ ಮನೆಗೆ ತೆರಳುವ ರಸ್ತೆಯ ಉದ್ಘಾಟನೆ ನೆರವೇರಿಸಿದರು. ತಮ್ಮ ವಿಶೇಷ ಅನುದಾನದಲ್ಲಿ ರೂ.4 ಲಕ್ಷ ನೀಡಿ ಅಭಿವೃದ್ಧಿಪಡಿಸಲಾಗಿದ್ದ ಸುಸಜ್ಜಿತ ಕಾಂಕ್ರೀಟ್ ರಸ್ತೆಯನ್ನು ಶಾಸಕರು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ತಿತೀರ ಪ್ರಭು, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಕೊಟ್ಟಂಗಡ ರಾಜ, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.