ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ.17 ರಂದು ರಾತ್ರಿ 7:50ಕ್ಕೆ ತೀರ್ಥೋದ್ಭವ
admincoorgdaily

ಭಾಗಮಂಡಲ:ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಯುಕ್ತ ಭಕ್ತಾದಿಗಳಿಗೆ ಅನುಕೂಲವಾಗುವಂತೆ ತಲಕಾವೇರಿ ಕಾವೇರಿ ಉಗಮ ಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿವೆ.
ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಸೂಚನೆ ಮೇರೆಗೆ ಕಾಮಗಾರಿಗಳು ಪ್ರಗತಿಯಲ್ಲಿವೆ.
ಭಕ್ತಾದಿಗಳ ಓಡಾಟಕ್ಕೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗ, ದೇವಸ್ಥಾನದ ಒಳಾಂಗಣದ ನೆಲಹಾಸು ಮತ್ತು ನೂತನ ಹೊದಿಕೆಗಳನ್ನು ಅಳವಡಿಸಿ ದೇವಸ್ಥಾನದ ಸೌಂದರ್ಯವನ್ನು ಹೆಚ್ಚಿಸುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.