ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ
admincoorgdaily

ಮಡಿಕೇರಿ:-2026ನೇ ಶೈಕ್ಷಣಿಕ ಸಾಲಿನ ನವೆಂಬರ್/ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಮಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕಾರ್ಯಕ್ರಮಗಳ ಪ್ರಥಮ, ತೃತೀಯ ಹಾಗೂ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಯಾವುದೇ ದಂಡ ಶುಲ್ಕವಿಲ್ಲದೆ ಅಕ್ಟೋಬರ್ 7 ಕ್ಕೆ ಪಾವತಿಸಬಹುದಾಗಿದೆ. ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಅ.12 ಕೊನೆಯ ದಿನಾಂಕವಾಗಿರುತ್ತದೆ. ದಂಡ ಶುಲ್ಕವಾಗಿ ರೂ.300 ಪಾವತಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಶುಲ್ಕ ಪಾವತಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.