ಅಂಬೇಡ್ಕರ್ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಮಾಜಿ ಸಚಿವ ಎನ್. ಮಹೇಶ್
admincoorgdaily

ಮಡಿಕೇರಿ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಎನ್. ಮಹೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರತಿಮೆ ನಿರ್ಮಾಣದ ಪ್ರಗತಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಅದ್ಧೂರಿಯಾಗಿ ಅನಾವರಣಗೊಳಿಸುವಂತಾಗಲಿ ಎಂದು ಶುಭ ಹಾರೈಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯು ಸಮಾಜಕ್ಕೆ, ವಿಶೇಷವಾಗಿ ಯುವ ಪೀಳಿಗೆಗೆ ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರುವ ಮಹತ್ವದ ಕಾರ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಎಚ್.ಎಲ್. ದಿವಾಕರ್, ಮಡಿಕೇರಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಸಿ. ಸತೀಶ್, ಲೋಹಿತ್ ಹಾಗೂ ಗಣೇಶ್ ಉಪಸ್ಥಿತರಿದ್ದರು.