Kodagu

ಮರಂದೋಡ ಗ್ರಾಮಕ್ಕೆ ರಸ್ತೆಗಾಗಿ ಮನವಿ - ನಿರ್ಮಿಸಿಕೊಡುವ ಭರವಸೆ ನೀಡಿದ ಶಾಸಕ ಪೊನ್ನಣ್ಣ

admincoorgdaily

ಮರಂದೋಡ ಗ್ರಾಮಕ್ಕೆ ರಸ್ತೆಗಾಗಿ ಮನವಿ - ನಿರ್ಮಿಸಿಕೊಡುವ ಭರವಸೆ ನೀಡಿದ ಶಾಸಕ ಪೊನ್ನಣ್ಣ
ವಿರಾಜಪೇಟೆ;ಮಡಿಕೇರಿ ತಾಲ್ಲೂಕಿನ ಕಕ್ಕಬೆ ಭಾಗದ ಮರಂದೋಡ ಗ್ರಾಮದ ಪರಿಶಿಷ್ಟ ಪಂಗಡದ ನಿವಾಸಿಗಳು ರಸ್ತೆ ಸಂಪರ್ಕದ ಸೌಲಭ್ಯವಿಲ್ಲದಿರುವ ಸಮಸ್ಯೆಯನ್ನು ಮುಂದಿಟ್ಟುಕೊಂಡು ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ರಸ್ತೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.

ನಿವಾಸಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಗ್ರಾಮಕ್ಕೆ ಅಗತ್ಯವಿರುವ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಂಡು ರಸ್ತೆ ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.