Kodagu

ಅಂಗವಿಕಲರ ಪುನರ್ವಸತಿ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

admincoorgdaily

ಅಂಗವಿಕಲರ ಪುನರ್ವಸತಿ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಮಡಿಕೇರಿ(ಕೂರ್ಗ್ ಡೈಲಿ) :-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ವಿಶೇಷಚೇತನರ ಪುನರ್ವಸತಿ ಕೇಂದ್ರವನ್ನು ಪ್ರಾರಂಭಿಸುವ ಸಲುವಾಗಿ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  

        ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್, 25 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್ ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕಾಗಿದೆ.  ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ:08272-295829ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.