ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಅಹ್ವಾನ

ಮಡಿಕೇರಿ:-ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈ ವಿಶೇಷ ಡಿ.ಇ.ಡಿ. ಸಾಮಾನ್ಯ ಡಿ.ಇ.ಡಿ ಗೆ ಸಮಾನಾಂತರವಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50 (ಎಸ್.ಸಿ, ಎಸ್‍ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜುಲೈ, 25 ರ ಒಳಗೆ ವೆಬ್‍ಸೈಟ್ https://rehabcouncil. in ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ತರಬೇತಿ ಕಾರ್ಯಕ್ರಮ ರೆಗ್ಯೂಲರ್ ಆಗಿದ್ದು. ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ತರಬೇತಿ ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗ ಅವಕಾಶವಿವೆ. ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡಡಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಬಹುದು. ಶಾಲೆಗಳಲ್ಲಿ ಶಿಕ್ಷಕರಾಗಬಹುದು. ಸರ್ವ ಶಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು. ರಾಷ್ಟ್ರೀಯ ಸಂಸ್ಥೆಗಳು/ ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಬಹುದು. ಮಾತಿನ ತರವೇತಿ ಘಟಕಗಳಲ್ಲೂ ಕಾರ್ಯನಿರ್ವಹಿಸಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ ಪುಲಿಕೇಶಿ ರಸ್ತೆ, ತಿಲಕ್ ನಗರ, ಮೈಸೂರು. ದೂರವಾಣಿ ಸಂಖ್ಯೆ 0821-2491600, ತರಬೇತಿ ಸಂಯೋಜಕರು ಆಶಾ ವಿ.ಹಿರೇಮಠ್-9113561620, ಟಿ.ಡಿ.ಮಂಜುನಾಥ್ 9686762378 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.