Kodagu

ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

admincoorgdaily

ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ಮಡಿಕೇರಿ:-2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 198 ರಂತೆ ಅರಣ್ಯ ಅರಣ್ಯದಂಚಿನ ಹಾಡಿಗಳಲ್ಲಿ ವಾಸಮಾಡುತ್ತಿರುವ ಸೋಲಿಗ, ಹಸಲರು, ಗೌಡಲು, ಸಿದ್ದಿ, ಕುಡಿಯ, ಮಲೈಕುಡಿ, ಕಾಡುಕುರುಬ, ಇರುಳಿಗ, ಬೆಟ್ಟಕುರುಬ, ಯರವ, ಪಣಿಯನ್ ಬುಡಕಟ್ಟು ಜನಾಂಗದವರಿಗೆ “ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ” ಮನೆಗಳನ್ನು ನಿರ್ಮಾಣ ಮಾಡಲು ಅವಕಾಶವಿದ್ದು, ವಸತಿ ಸೌಲಭ್ಯಕ್ಕೆ ಸೆಪ್ಟೆಂಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9632465161, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-9482894676, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-7259552655 ರವರನ್ನು ಸಂಪರ್ಕಿಸುವುದು.
ಅರ್ಜಿದಾರರು ಪರಿಶಿಷ್ಟ ಪಂಗಡದ ಮಹಿಳಾ ಫಲಾನುಭವಿಯಾಗಿರಬೇಕು (ವಿವಾಹಿತ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿ), ಮಾಜಿ ಯೋಧರು, ವಿಶೇಷ ಚೇತನರು ಮತ್ತು ಹಿರಿಯನಾಗರಿಕರು ಇದ್ದ ಪಕ್ಷದಲ್ಲಿ ಪುರುಷರು ಸಹ ಅರ್ಹರಾಗಿರುತ್ತಾರೆ.
ನಿವೇಶನ ಲಭ್ಯವಿದ್ದು ವಸತಿ ರಹಿತರಾಗಿ ಗುಡಿಸಲು/ ತಾತ್ಕಾಲಿಕ ಶೆಡ್‍ಗಳಲ್ಲಿರುವವರು, ಶಿಥಿಲಗೊಂಡ ಮನೆ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು. ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು. 

ಅರ್ಜಿದಾರರು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್. ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆಗೆ ಲಿಂಕ್ ಹೊಂದಿರುವ ಮೊಬೈಲ್ ಸಂಖ್ಯೆ/ಸಂಪರ್ಕ ಸಂಖ್ಯೆ ಹೊಂದಿರಬೇಕು. ಅರ್ಜಿದಾರರು  ಸ್ವಂತ ನಿವೇಶನ ಹೊಂದಿದ್ದು, ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು ಮತ್ತು ಪಾರಂಪರಿಕ ಅರಣ್ಯ ಹಕ್ಕುಗಳ ಕಾಯ್ದೆಯನ್ವಯ ಜಿಲ್ಲಾ ಸಮಿತಿಯಿಂದ ನೀಡಲಾದ ಹಕ್ಕು ಪತ್ರ ಹೊಂದಿರಬೇಕು.
ಕುಟುಂಬದ ಹೆಸರಿನಲ್ಲಿ ಅರಣ್ಯ ಹಕ್ಕುಪತ್ರವಿದ್ದು, ಕಾನೂನಾತ್ಮಕವಾಗಿ ತಂದೆಯಿಂದ ಮಕ್ಕಳಿಗೆ ವರ್ಗಾವಣೆಯಾಗುವ ಸಂದರ್ಭವನ್ನು ಅವಲೋಕಿಸಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ/ ಕಾರ್ಯದರ್ಶಿಗಳು ವಿವಿಧ ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಹೊಂದಿರುವ ಸಾಗುವಳಿ/ಕೃಷಿ ಭೂವಿ/ಅರಣ್ಯಹಕ್ಕು ಜಮೀನುಗಳಲ್ಲಿ ಮನೆ ನಿರ್ಮಾಣಕ್ಕಾಗಿ ಗರಿಷ್ಠ 2 ಗುಂಟೆ ಮೀರದಂತೆ ಒಂದು ಬದಿಯಲ್ಲಿನ ನಿರ್ಧಿಷ್ಟ ಭಾಗವನ್ನು “ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಮಾತ್ರ” ಎಂದು ಅನುಮತಿ ನೀಡತಕ್ಕದ್ದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ ಅವರು ತಿಳಿಸಿದ್ದಾರೆ.