Kodagu

ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

admincoorgdaily

ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ
ಮಡಿಕೇರಿ:-2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

     ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‍ಸೈಟ್ https://kswdc.karnataka.gov.in ರ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 31  ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸುಮಂಗಳ ಹಿರೇಮನಿ ಅವರು ತಿಳಿಸಿದ್ದಾರೆ.