ಸೋಮವಾರಪೇಟೆ ಎಸ್‌ಬಿಐ ಎಟಿಎಂ ಕಳ್ಳತನ ಯತ್ನ: ಇಬ್ಬರು ಆರೋಪಿಗಳು, ಕಾರು ಪೊಲೀಸರ ವಶಕ್ಕೆ
admincoorgdaily

ಸೋಮವಾರಪೇಟೆ: ಸೆಪ್ಟೆಂಬರ್ 4ರಂದು ಸೋಮವಾರಪೇಟೆ ಪಟ್ಟಣದ ಗಾಂಧಿ ಸರ್ಕಲ್ ಬಳಿ ಇರುವ ಎಸ್‌ಬಿಐ ಬ್ಯಾಂಕ್‌ನ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ಸುಮೇಶ್ ಅವರು ನೀಡಿದ ದೂರಿನ ಮೇರೆಗೆ ಮೊ.ಸಂ. 219/2026, ಕಲಂ 303(2), 62 BNS ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಸೆಪ್ಟೆಂಬರ್ 11ರಂದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.