Kodagu

ಮಡಿಕೇರಿಯಲ್ಲಿ ನಾಳೆ ಆಟೋ ಸಂಚಾರ ಸಂಪೂರ್ಣ ಬಂದ್; ರಾಪಿಡೋ ಬೈಕ್ ಟ್ಯಾಕ್ಸಿ ವಿರುದ್ಧ ಚಾಲಕರ ಆಕ್ರೋಶ

admincoorgdaily

ಮಡಿಕೇರಿಯಲ್ಲಿ ನಾಳೆ ಆಟೋ ಸಂಚಾರ ಸಂಪೂರ್ಣ ಬಂದ್; ರಾಪಿಡೋ ಬೈಕ್ ಟ್ಯಾಕ್ಸಿ ವಿರುದ್ಧ ಚಾಲಕರ ಆಕ್ರೋಶ
ಮಡಿಕೇರಿ; ರಾಪಿಡೋ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸಿ ಮಡಿಕೇರಿ ನಗರದಲ್ಲಿ ನಾಳೆ ಆಟೋ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲು ಆಟೋ ಮಾಲೀಕರು ಮತ್ತು ಚಾಲಕರ ಸಂಘ ನಿರ್ಧರಿಸಿದೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಡಿಕೇರಿ ನಗರದಾದ್ಯಂತ ಆಟೋ ಸಂಚಾರ ಬಂದ್ ಆಗಲಿದೆ. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ರಾಪಿಡೋ ಬೈಕ್ ಟ್ಯಾಕ್ಸಿಗಳ ಅಕ್ರಮ ಕಾರ್ಯಾಚರಣೆ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು.

ರಾಪಿಡೋ ಬೈಕ್ ಟ್ಯಾಕ್ಸಿಗಳಿಂದಾಗಿ ತಮ್ಮ ದೈನಂದಿನ ಆದಾಯಕ್ಕೆ ತೀವ್ರ ಹೊಡೆತ ಬೀಳುತ್ತಿದೆ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಮಕ್ಕಳಿಗೂ ತೊಂದರೆ:

ಪ್ರತಿಭಟನೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋಗಳೂ ಪಾಲ್ಗೊಳ್ಳಲಿದ್ದು, ಸಂಚಾರ ನಡೆಸುವುದಿಲ್ಲ ಎಂದು ಸಂಘ ಸ್ಪಷ್ಟಪಡಿಸಿದೆ. ಹೀಗಾಗಿ ನಾಳೆ ಶಾಲಾ ಮಕ್ಕಳು, ಪೋಷಕರು ಮತ್ತು ಆಟೋ ಅವಲಂಬಿತ ಸಾರ್ವಜನಿಕರಿಗೆ ಸಂಚಾರದ ಸಮಸ್ಯೆ ಎದುರಾಗಲಿದ್ದು, ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಘ ಮನವಿ ಮಾಡಿದೆ.

ಒಂದು ದಿನದ ಈ ಬಂದ್‌ಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಆಟೋ ಮಾಲೀಕರು ಮತ್ತು ಚಾಲಕರ ಸಂಘ ಕೋರಿದೆ.