ಕಾವೇರಿ ತೀರ್ಥೋದ್ಭವ ಹಿನ್ನೆಲೆ: ಅ.17 ರಂದು ಭಾಗಮಂಡಲ ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
admincoorgdaily

ಮಡಿಕೇರಿ:- ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ-ತಲಕಾವೇರಿಯಲ್ಲಿ ಅಕ್ಟೋಬರ್, 17 ರಂದು ರಾತ್ರಿ 7.50 ಗಂಟೆಗೆ ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವುದರಿಂದ ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 17 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ 20 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.