ಗೌರಿ-ಗಣೇಶ ವಿಸರ್ಜನೆ ಹಿನ್ನೆಲೆ: ಕೊಡಗು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ
admincoorgdaily

ಮಡಿಕೇರಿ: ಗೌರಿ-ಗಣೇಶ ಹಬ್ಬದ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕೊಡಗು ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸೋಮಶೇಖರ್ ಎಸ್.ಜೆ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮನವಿ ಮೇರೆಗೆ ಅಬಕಾರಿ ಕಾಯ್ದೆ 1965ರ ಕಲಂ 21 ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.
ಆದೇಶದ ವಿವರ:
ಆದೇಶ ಸಂಖ್ಯೆ: ಎಂಐಜಿ/ಇತರೆ/46/2026-27 ದಿನಾಂಕ: 13/09/2026
ನಿಷೇಧದ ಅವಧಿ: ಸೆ.14 ರಂದು ಮಧ್ಯಾಹ್ನ 2 ಗಂಟೆಯಿಂದ ಅರ್ಧರಾತ್ರಿ 12 ಗಂಟೆಯವರೆಗೆ
ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ಕ್ಲಬ್ ಗಳಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧ.
ಜಿಲ್ಲೆಯಲ್ಲಿ ಸುಮಾರು 630 ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು 121 ಕಡೆಗಳಲ್ಲಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ನಗರ/ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧ ಹೇರಲಾಗಿದೆ.