ಸೆ. 8 ರಂದು ಗ್ರಾಮ ಪಂಚಾಯಿತಿ ನೌಕರರಿಂದ ಬೆಂಗಳೂರು ಚಲೋ ಚಳುವಳಿ
admincoorgdaily

ಸುಂಟಿಕೊಪ್ಪ:
ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು ಅದನ್ನು ತಡೆಹಿಡಿದಿರುವ ಮತ್ತು ಪುನರ್ ಪರಿಶೀಲನೆಗಾಗಿ ಉಪಸಮಿತಿ ರಚಿಸಿರುವುದನ್ನು ವಿರೋಧಿಸಿ ಸೆ.8 ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಪಿ.ಆರ್.ಭರತ್ ಹೇಳಿದ್ದಾರೆ.
ಶುಕ್ರವಾರದಂದು ಬೆಳಿಗ್ಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಮಾತನಾಡಿದ ಅವರು ನಮ್ಮ ಬೇಡಿಕೆಯನ್ನು ಮನ್ನಿಸಿ ರಾಜ್ಯ ಸರಕಾರ ದಿನಾಂಕ 22-05-2026 ರ ಅಧಿಸೂಚನೆಯಂತೆ ರೂ 21,600 ಕನಿಷ್ಠ ವೇತನ ನಿಗದಿಗೊಳಿಸಿ ಆದೇಶ ಮಾಡಲಾಗಿದೆ. ಆದರೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರಕಾರ ಈ ವೇತನವನ್ನು ತಡೆಹಿಡಿದು, ಪುನರ್ ಪರಿಶೀಲನೆಗೆಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು ಅದನ್ನು ಕೂಡಲೇ ವಿಸರ್ಜಿಸಬೇಕು. ವೇತನವನ್ನು ಇತರ ಬೇಡಿಕೆಗಳ ಜೋತೆ ತಕ್ಷಣ ಈಡೇರಿಸುವ ನಿಟ್ಟಿನಲ್ಲಿ ಸೆ.8 ರಂದು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭರತ್ ಹೇಳಿದರು.