ಭಾಗಮಂಡಲ:ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಭಾಗಮಂಡಲ:ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಮಡಿಕೇರಿ: ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆ ಭಾಗಮಂಡಲದಲ್ಲಿ 2023-25ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುಳ್ಯ ಕೆವಿಜಿ ಐಟಿಐ ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಗೌಡ ಬಾಳಿಲ ವಿದ್ಯಾರ್ಥಿಗಳಿಗೆ ಸಂಸ್ಥೆ ಬೆಳೆದು ಬಂದ ಬಗ್ಗೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳು ಗೌರವಯುತವಾಗಿ ಬಾಳಲು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀಕಾಂತ್ ಕೆವಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರತಿಯೊಂದು ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. 

ಕಚೇರಿ ಅಧೀಕ್ಷಕ ವಿನೋದ್ ಸಿ.ಕೆ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಇವರು ಕಾರ್ಯಕ್ರಮ ನಿರೂಪಿಸಿದರು.ಕಿರಿಯ ತರಬೇತಿ ಅಧಿಕಾರಿಗಳಾದ ಕೃಷ್ಣಮೂರ್ತಿ ಜೆ ಸ್ವಾಗತಿಸಿದರು ಮತ್ತು ಜಯಪ್ರಕಾಶ್ ಕೆ . ಜಿ ವಂದಿಸಿದರು.