Kodagu

ಭಾಗಮಂಡಲ;ಭಗಂಡೇಶ್ವರ ಬ್ರಹ್ಮಕಲಶೋತ್ಸವಕ್ಕೆ 1 ಕೋಟಿ ಅನುದಾನಕ್ಕೆ ಮನವಿ

admincoorgdaily

ಭಾಗಮಂಡಲ;ಭಗಂಡೇಶ್ವರ ಬ್ರಹ್ಮಕಲಶೋತ್ಸವಕ್ಕೆ 1 ಕೋಟಿ ಅನುದಾನಕ್ಕೆ ಮನವಿ
ವಿರಾಜಪೇಟೆ: ಮೇ 2027 ತಿಂಗಳಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿಯಲ್ಲಿ ನೆರವೇರಿಸಲು ಇಚ್ಛಿಸಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಒಂದು ಕೋಟಿ ರೂ. ಅನುದಾನ ನೀಡುವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಬಾನಂಡ ಪೃತ್ಯು ರವರು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ನಿಟ್ಟೂರು ವಲಯ ಅಧ್ಯಕ್ಷ ಪವನ್ ಚಿಟ್ಟಿಯಪ್ಪ ಹಾಗೂ ಪ್ರಮುಖರು ಉಪಸ್ಥಿತರಿದ್ದರು.