ಜಿಲ್ಲಾ ಪಂಚಾಯತ್ ಮೀಸಲಾತಿಯಲ್ಲಿ ಬಿಗ್ ಟ್ವಿಸ್ಟ್; ಕೊಡಗಿನಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಮೀಸಲಾತಿ ಬದಲಾವಣೆ?
K.M ISMAIL KANDAKKARE

ಮಡಿಕೇರಿ; ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಮೀಸಲಾತಿಯ ಅಂತಿಮ ಅಧಿಸೂಚನೆ ಸೋಮವಾರ ಪ್ರಕಟಗೊಂಡಿತ್ತು.ಆದರೆ ಕೊಡಗು ಜಿಲ್ಲೆಯಲ್ಲಿ ಕರಡು ಪಟ್ಟಿಯಲ್ಲಿದ್ದ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಮುಂದುವರಿಸಲಾಗಿತ್ತು.ಆದರೆ ಇದೀಗ ಮತ್ತೊಮ್ಮೆ ಅಂತಿಮ ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ,ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಬದಲಾವಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾಮಾನ್ಯ ಕ್ಷೇತ್ರವಾಗಿದ್ದ ಮಾದಪುರ ಜಿಲ್ಲಾ ಪಂಚಾಯತ್ ಕ್ಷೇತ್ರ ಇದೀಗ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.ಸಾಮಾನ್ಯ ಮಹಿಳೆಗೆ ಮೀಸಲಿದ್ದ ಕೂಡಿಗೆ ಕ್ಷೇತ್ರವು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅದೇ ರೀತಿಯಲ್ಲಿ ಗುಡ್ಡೆಹೊಸೂರು ಕ್ಷೇತ್ರದಲ್ಲಿ ಹಿಂದುಳಿದ ವರ್ಗ ಅ ಸಾಮಾನ್ಯ ಬದಲಿಗೆ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಿಡಲಾಗಿದೆ.
ಅದೇ ರೀತಿಯಲ್ಲಿ ವಾಲ್ನೂರು-ತ್ಯಾಗತ್ತೂರು ಕ್ಷೇತ್ರದಲ್ಲಿ ಹಿಂದುಳಿದ ವರ್ಗ ಅ ಮಹಿಳಾ ಮೀಸಲನ್ನು ಬದಲಿಸಿ ಹಿಂದುಳಿದ ವರ್ಗ ಅ ಸಾಮಾನ್ಯ ಕ್ಷೇತ್ರವಾಗಿ ಬದಲಾವಣೆ ಮಾಡಲಾಗಿದೆ.ಕೊಡಗು ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ
ಮೀಸಲಾತಿ ಬದಲಾವಣೆಯ ಬಗ್ಗೆ ಇಸ್ಮಾಯಿಲ್ ಕಂಡಕರೆ ಅವರು ಜಿಲ್ಲೆಯ ಸ್ಥಳೀಯ ಪತ್ರಿಕೆ ಶಕ್ತಿಯಲ್ಲಿ ವಿಶೇಷ ವರದಿ ಮಾಡಿದ್ದರು.
ಇನ್ನೇನೂ ಅಧಿಕೃತ ಅಧಿಸೂಚನೆ ಹೊರಬೀಳ ಬೇಕಿದೆ.