Kodagu

ನಂಬರ್ ಪ್ಲೇಟ್ ಬದಲಿಸಿ ಓಡಾಟ - ಬೈಕ್ ಕಳ್ಳ ಕೊನೆಗೂ ಲಾಕ್

admincoorgdaily

ಸಾಂದರ್ಭಿಕ ಚಿತ್ರ (AI)
ಸೋಮವಾರಪೇಟೆ: ಬೈಕ್ ಕಳ್ಳತನ ಮಾಡಿ ನಂಬರ್ ಪ್ಲೇಟ್ ಬದಲಾಯಿಸಿ ಆರಾಮಾಗಿ ಓಡಾಡುತ್ತಿದ್ದ ಆರೋಪಿಯನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿ, ಕಳುವಾದ ಬೈಕ್ ವಶಪಡಿಸಿಕೊಂಡಿದ್ದಾರೆ.

ತಣ್ಣೀರುಹಳ್ಳ ಗ್ರಾಮದ ದರ್ಶನ್ ಬಂಧಿತ ಆರೋಪಿ. ಸೋಮವಾರಪೇಟೆ ಪಟ್ಟಣದ ನಿವಾಸಿ ಸಂತೋಷ್ ಅವರು ತಮ್ಮ ಬೈಕ್ ಕಳುವಾಗಿದೆ ಎಂದು ಕಳೆದ ತಿಂಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಚುರುಕಾಗಿ ಕಾರ್ಯಾಚರಣೆ ನಡೆಸಿ ಕಳುವಾಗಿದ್ದ ಬೈಕ್ ಅನ್ನು ಪತ್ತೆ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ಮೊಕದ್ದಮೆ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ಮುದ್ದು ಮಹದೇವ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಸಿಬ್ಬಂದಿ ನಡೆಸಿದ್ದಾರೆ.