ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಮೈಸೂರು:ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಹಾಗೂ ಆಷಾಢ ಶುಕ್ರವಾರದ ಅಂಗವಾಗಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕುಟುಂಬ ಸಮೇತವಾಗಿ ಭೇಟಿ ನೀಡಿ, ನಾಡ ದೇವತೆ ಜಗನ್ಮಾತೆ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು.