Kodagu

ಬೋಸ್ ಸೋಮಯ್ಯಗೆ 'ಸಹಕಾರ ಶ್ರೇಷ್ಠ' ಪ್ರಶಸ್ತಿ

admincoorgdaily

ಬೋಸ್ ಸೋಮಯ್ಯಗೆ 'ಸಹಕಾರ ಶ್ರೇಷ್ಠ' ಪ್ರಶಸ್ತಿ
ಪೊನ್ನಂಪೇಟೆ: ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಮುದ್ದಿಯಡ ಬೋಸ್ ಸೋಮಯ್ಯ 2025-26ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2026ನೇ ಸಾಲಿನ ರಾಜ್ಯ ಸರ್ಕಾರದ ಪ್ರತಿಷ್ಠಿತ 'ಸಹಕಾರ ಶ್ರೇಷ್ಠ' ಪ್ರಶಸ್ತಿಗೆ ಭಾಜನರಾಗಿರುವ ಸೋಮಯ್ಯ ಅವರು, 1978ರಲ್ಲಿ ಪೊನ್ನಂಪೇಟೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಆರಂಭಿಸಿದ್ದರು. ಬಳಿಕ ಪೊನ್ನಂಪೇಟೆ ವ್ಯವಸಾಯ ಮಾರಾಟ ಮತ್ತು ಪರಿವರ್ತನ ಸಹಕಾರ ಸಂಘದ ಅಧ್ಯಕ್ಷರಾಗಿ ನಾಲ್ಕು ಅವಧಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ನಿರ್ದೇಶಕರಾಗಿದ್ದಾರೆ.

ಕೊಡಗು ಜಿಲ್ಲಾ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಪೊನ್ನಂಪೇಟೆ-ಬಲ್ಯಮುಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎರಡು ಬಾರಿ, ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಒಂದು ಅವಧಿ ಕಾರ್ಯನಿರ್ವಹಿಸಿದ್ದಾರೆ. ಪೊನ್ನಂಪೇಟೆ ಕೊಡವ ಸಮಾಜದ ಜಂಟಿ ಕಾರ್ಯದರ್ಶಿ ಹಾಗೂ ಅಪ್ಪಚ್ಚಕವಿ ವಿದ್ಯಾಲಯದ ಸ್ಥಾಪಕ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಹಕಾರ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಅವರ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.