Kodagu

ಬೇತ್ರಿ ಹೊಳೆಯಲ್ಲಿ ಮುಳುಗಿ ಬಾಲಕ ಸಾವು - ಮೃತನ ಮನೆಗೆ ಶಾಸಕ ಪೊನ್ನಣ್ಣ ಭೇಟಿ, ಸಾಂತ್ವನ

admincoorgdaily

ಬೇತ್ರಿ ಹೊಳೆಯಲ್ಲಿ ಮುಳುಗಿ ಬಾಲಕ ಸಾವು - ಮೃತನ ಮನೆಗೆ ಶಾಸಕ ಪೊನ್ನಣ್ಣ ಭೇಟಿ, ಸಾಂತ್ವನ
ವಿರಾಜಪೇಟೆ:ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಯಾನ್ (13) ಎಂಬ ವಿದ್ಯಾರ್ಥಿ ಬೇತ್ರಿ ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ದುರ್ಘಟನೆ ನ.10 ರಂದು ನಡೆದಿದೆ.

ರಯಾನ್ ಈಜಲು ತೆರಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳೀಯರು ರಕ್ಷಣೆಗೆ ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ವಿಷಯ ತಿಳಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದುಃಖದಲ್ಲಿ ಭಾಗಿಯಾದ ಅವರು ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಸದಸ್ಯ ಮೊಹಮ್ಮದ್ ರಾಫಿ, ಪಕ್ಷದ ಮುಖಂಡರಾದ ಕಲಿಯಂಡ ಸಂಪನ್ ಅಯ್ಯಪ್ಪ, ಕುಂಡಚ್ಚಿರ ಮಂಜು ದೇವಯ್ಯ, ಆಲೀರ ಪವಿಲ್ ಉಸ್ಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.