Kodagu

ಸಂವಿಧಾನ ಅಧ್ಯಯನದಿಂದಲೇ ಸಮ ಸಮಾಜ ನಿರ್ಮಾಣ ಸಾಧ್ಯ;ಶಾಸಕ‌ ಎಎಸ್ ಪೊನ್ನಣ್ಣ

admincoorgdaily

ಸಂವಿಧಾನ ಅಧ್ಯಯನದಿಂದಲೇ ಸಮ ಸಮಾಜ ನಿರ್ಮಾಣ ಸಾಧ್ಯ;ಶಾಸಕ‌ ಎಎಸ್ ಪೊನ್ನಣ್ಣ
ವಿರಾಜಪೇಟೆ,: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ 2026ನೇ ಸಾಲಿನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಯುವ ಸಂಸತ್ತು ಕಾರ್ಯಕ್ರಮ ವಿರಾಜಪೇಟೆಯ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿದರು.

ದೇಶದ ಸಂವಿಧಾನವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅವರು ತಿಳಿಸಿದರು.

ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಹಕ್ಕು ಸಿಕ್ಕಿದೆ. ಇಲ್ಲದಿದ್ದರೆ ದೇಶದ ವಿದ್ಯಾವಂತರು ಮತ್ತು ತೆರಿಗೆ ಕೊಡುತ್ತಿದ್ದ ಶ್ರೀಮಂತರಿಗೆ ಮಾತ್ರ ಮತದಾನದ ಹಕ್ಕು ಸಿಗುತ್ತಿತ್ತು ಎಂದು ಹೇಳಿದರು.

ಯಾವುದೇ ಅಧಿಕಾರಿಗಳಿಗೆ ಅವರದೇ ಕಾರ್ಯವನ್ನು ಮಾಡುವಂತೆ ನಿರ್ದೇಶನವಿರುತ್ತದೆ. ಅದನ್ನು ಮೀರಿ ವ್ಯಾಪ್ತಿ ಮೀರಿ ಹೆಚ್ಚು ಕಾರ್ಯ ಮಾಡುವಂತಿಲ್ಲ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್, ವಿರಾಜಪೇಟೆ ತಹಶೀಲ್ದಾರ್ ಪಿ.ಸಿ. ಪ್ರವೀಣ್ ಕುಮಾರ್, ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ ಸಿ.ಎಸ್., ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ.ಆರ್., ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಬಿ. ನಟೇಶ್, ಸಹಾಯಕ ನಿರ್ದೇಶಕಿ ಆಶಾ, ಸಂತ ಅನ್ನಮ್ಮ ಕಾಲೇಜಿನ ಧರ್ಮಗುರುಗಳಾದ ರೆ.ಫಾ. ಮದಲೈ ಮುತ್ತು, ಫಾ. ಡೊಮಿನಿಕ್, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಅಂಬೇಡ್ಕರ್ ಸಂಘದ ಸದಸ್ಯರಾದ ರಜನೀಕಾಂತ್, ಗಾಯತ್ರಿ ನರಸಿಂಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ನಂತರ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಯುವ ಸಂಸತ್ತು ಅಧಿವೇಶನ ನಡೆಯಿತು.