ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದ ಕಾರು
admincoorgdaily

ಸಿದ್ದಾಪುರ, ಅ.25: ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮದ ಆಸ್ಥಾನ ಹಾಡಿಗೆ ತೆರಳುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಮಗುಚಿ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ಸಾರ್ವಜನಿಕರು ದೌಡಾಯಿಸಿದ್ದು, ಕಾರಿನಲ್ಲಿದ್ದವರನ್ನು ಹೊರತೆಗೆದಿದ್ದಾರೆ.