ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾವೇರಿ ಜಲಾನಯನ ಮಂಡಳಿ ನಿರ್ದೇಶಕ ಸೂರಜ್ ಹೊಸೂರು
admincoorgdaily

ಮಡಿಕೇರಿ:ಕಾವೇರಿ ಜಲನಯನ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ನಿರ್ದೇಶಕರಾದ ಶ್ರೀ ಶಿವಪ್ರಸಾದ್ (ಸೂರಜ್ ಹೊಸೂರು) ಅವರು ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ, ತಮ್ಮ ನೇಮಕಾತಿಗೆ ಸಹಕಾರ ಹಾಗೂ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರು ಸೂರಜ್ ಹೊಸೂರು ಅವರಿಗೆ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತಾಗಲಿ ಎಂದು ಶುಭ ಹಾರೈಸಿದರು.