Kodagu

ಚೆಂಬು: ಆನೆರುಳ್ಳ SC ಕಾಲೋನಿ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ

admincoorgdaily

ಚೆಂಬು: ಆನೆರುಳ್ಳ SC ಕಾಲೋನಿ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ

ಸಂಪಾಜೆ: ಚೆಂಬು ಭಾಗದ ಆನೆರುಳ್ಳ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯ ಸಮುದಾಯ ಭವನದ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಕಾಮಗಾರಿ ವೀಕ್ಷಣೆ ನಡೆಸಿದರು.

ಸಮುದಾಯ ಭವನಕ್ಕೆ ಶಾಸಕರು ನೀಡಿದ 5 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

ಈ ಸಂದರ್ಭದಲ್ಲಿ ಸಮುದಾಯ ಭವನದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, ಅಂಗನವಾಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಮಾತನಾಡಿ, ಸರ್ಕಾರ ನೀಡುವ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.