ಚೆನ್ನಯ್ಯನಕೋಟೆ 75 ಲಕ್ಷ ವೆಚ್ಚದಲ್ಲಿ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
admincoorgdaily

ಸಿದ್ದಾಪುರ:ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿಯಿಂದ ಕೋಟೆಮಚ್ಚಿಗೆ ತೆರಳುವ ರಸ್ತೆ ಹಾಗೂ ಚೋಟ್ಟೆಪಾರೆಯಿಂದ ಬಸವನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ವಿಶೇಷ ಅನುದಾನದಡಿ 75 ಲಕ್ಷ ವೆಚ್ಚದಲ್ಲಿ ಈ ಎರಡೂ ರಸ್ತೆ ಕಾಮಗಾರಿಗಳು ನಡೆಯಲಿವೆ.
ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಜನಪರ ಆಡಳಿತಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಸ್ಥರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಬ್ಲಾಕ್ ಉಪಾಧ್ಯಕ್ಷರಾದ ರವೀಂದ್ರ ಭಾವೆ, ಚೆನ್ನಯ್ಯನಕೋಟೆ ವಲಯ ಅಧ್ಯಕ್ಷರಾದ ಮನು ಹೆಚ್.ಆರ್., ಗ್ರಾಮ ಪಂಚಾಯಿತಿ ಸದಸ್ಯರಾದ ಶೀಲಾ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕಾವೇರಮ್ಮ, ಪಕ್ಷದ ಮುಖಂಡರಾದ ಇಬ್ರಾಹಿಂ, ಮಿಲನ್ ಸುಬ್ಬಯ್ಯ, ರತನ್ ಕಾಚಿಲಂಡ, ಜೆ.ಕೆ. ರಾಮು, ಮುಸ್ತಫಾ ಪಿ.ಎಂ. ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.