ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
admincoorgdaily

ಭಾಗಮಂಡಲ: ಚೇರಂಬಾಣೆ ಕ್ಲಸ್ಟರ್
ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಬೆಟ್ಟಗೇರಿಯ ಉದಯ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಿತು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಂತರ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ತಳೂರು ಕಿಶೋರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ಮಾದಪ್ಪ ಅವರು ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದ್ದು, ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ನಂತರ ಸಿಆರ್ಪಿ ಶ್ರೀಮತಿ ಚಂದ್ರಿಕಾ ಅವರು ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ವಿಕಸನದಲ್ಲಿ ಅದರ ಪಾತ್ರದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿದರು.
ತದನಂತರ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಿಗದಿಪಡಿಸಿದ ಕೊಠಡಿಗಳಲ್ಲಿ ವ್ಯವಸ್ಥಿತವಾಗಿ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಧ್ಯಾಹ್ನ ಆಗಮಿಸಿದ ಶಿಕ್ಷಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿಯಾದ ಶ್ರೀಮತಿ ಯಮುನಾ ಅವರು ಉಪಸ್ಥಿತರಿದ್ದ ಗಣ್ಯರು, ಶಿಕ್ಷಕರು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದನಾರ್ಪಣೆ ಮಾಡಿದರು.
ವರದಿ: ಪ್ರಿತುನ್ ಪೂವಣ್ಣ