2026ರ ಫೆ.6ರಿಂದ10ರವರೆಗೆ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್

2026ರ ಫೆ.6ರಿಂದ10ರವರೆಗೆ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಪ್ರತಿವರ್ಷದಂತೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2026ರ ಫೆಬ್ರವರಿ 06 ರಿಂದ 10 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.