ಚೆಟ್ಟಳ್ಳಿ;ಕೆಲಸವಿಲ್ಲದೆ ಮನನೊಂದ ಕಾರ್ಮಿಕ ಆತ್ಮಹತ್ಯೆ
admincoorgdaily

ಚೆಟ್ಟಳ್ಳಿ: ಕಳೆದ ಆರು ತಿಂಗಳಿನಿಂದ ಕೆಲಸವಿಲ್ಲದೆ ಮನನೊಂದಿದ್ದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆಟ್ಟಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೆಟ್ಟಳ್ಳಿಯ ಮಂಜುನಾಥ್ (37) ಮೃತಪಟ್ಟವರು. ಇವರು ಪತ್ನಿ ಸರಸ್ವತಿ ಹಾಗೂ ಕುಟುಂಬದೊಂದಿಗೆ ಕಾಫಿ ಬೋರ್ಡ್ನಲ್ಲಿ ವಾಸವಾಗಿದ್ದರು. ಕಳೆದ ಆರು ತಿಂಗಳಿನಿಂದ ಯಾವುದೇ ಕೆಲಸವಿಲ್ಲದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ತಾಯಿ ಕಾವೇರಿ ದೂರಿನಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಚೆಟ್ಟಳ್ಳಿಯ ಕಂಡಕರೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಡಿಕೇರಿ ಗ್ರಾಮಾಂತರ ಠಾಣೆಯ ಎಎಸ್ಐ ಸುಬ್ರಮಣ್ಯ ಹಾಗೂ ಚೆಟ್ಟಳ್ಳಿ ಪೊಲೀಸ್ ಸಿಬ್ಬಂದಿಗಳಾದ ವಿಶಲ್ ಒಡೆಯರ್ ಮತ್ತು ಬಾಳಗೌಡ ಪಾಟೀಲ್ ಹಾಜರಿದ್ದರು.